ಮಕ್ಕಳ ಸಹಾಯವಾಣಿ 1098ಗೆ ಸಲ್ಲಿಕೆಯಾದ ದೂರಿನ ಮೇರೆಗೆ ತಪಾಸಣೆ ಕೈಗೊಳ್ಳಲಾಯಿತು. ಸಮಯದಲ್ಲಿ 2 ಅಪ್ರಾಪ್ತ ಬಾಲಕರು ಪೈಪ್ ಲೈನ್ ಅಗೆಯುವ ಕೆಲಸದಲ್ಲಿ ತೊಡಗಿಕೊಂಡಿರುವುದು ಕಂಡು ಬಂದಿದ್ದು 2ರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಕರ ವಶಕ್ಕೆ ಒಪ್ಪಿಸಲಾಗಿದೆ.
ರಾಯಚೂರು ತಾಲೂಕಿನ ಮಿಟ್ಟಿ ಮಲ್ಕಾಪೂರ ಗ್ರಾಮ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ತಪಾಸಣೆ/ಹಠಾತ್ ದಾಳಿ ಹಮ್ಮಿಕೊಳ್ಳಲಾಯಿತು.
ಸಂದರ್ಭದಲ್ಲಿ 2 ಬಾಲಕಿಯರು ಕೃಷಿ ಕೆಲಸಕ್ಕೆ ಹೋಗುತ್ತಿರುವುದು ಕಂಡು ಬಂದಿರುತ್ತದೆ. ಮಕ್ಕಳನ್ನು ಕೆಲಸಕ್ಕೆ ಹೋಗದಂತೆ ತಡೆದು ಅವರು ವಿದ್ಯಾಭ್ಯಾಸ ಮಾಡುತ್ತಿದ್ದ ಶಾಲೆಗೆ ಮರು ದಾಖಲಿಸಲಾಯಿತು.
ಹಿರೇಕೆರೂರ ತಾಲ್ಲೂಕಿನ ಕೊಡ ಗ್ರಾಮಕ್ಕೆ ಭೇಟಿ ನೀಡಿ 18 ವರ್ಷದೊಳಗಿನ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳು ಕೆಲಸ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸಿ ನಂತರ ಕೊಡ ಗ್ರಾಮದ ಮಾರುತಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಪದ್ಧತಿ (ನಿಷೇದ ಮತ್ತು ನಿಯಂತ್ರಣ ) ಕಾಯ್ದೆ-1986 ಕುರಿತು ಅರಿವು ಮೂಡಿಸಲಾಯಿತು.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ತಪಾಸಣೆ/ಹಠಾತ್ ದಾಳಿ ಹಮ್ಮಿಕೊಳ್ಳಲಾಯಿತು. ಸದರಿ ಸಂದರ್ಭದಲ್ಲಿ ಲಿಂಗಸುಗೂರು ತಾಲೂಕಿನ ಯರಡೋಣ ಗ್ರಾಮದ ವ್ಯಾಪ್ತಿಯಲ್ಲಿ ವ್ಯಾಪ್ತಿಯ ಸುತ್ತಮುತ್ತಲಿನ ಹೊಲಗಳು ಮತ್ತು ತೋಟಗಳಿಗೆ ಭೇಟಿ ನೀಡಿ ತಪಾಸಣೆ ಕೈಗೊಂಡು ಜಾಗೃತಿಯನ್ನು ಮೂಡಿಸಲಾಯಿತು.
ಮಂಗಳೂರು ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಗರದ ವಿವಿಧ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೋಟೆಲ್ ಒಂದರಿಂದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಿಪಡಿಸಿ ಪುನರವಸ್ಥೆಗೊಳಿಸಲಾಯಿತು.
ಮಂಗಳೂರು ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಗರದ ವಿವಿಧ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೋಟೆಲ್ ಒಂದರಿಂದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಿಪಡಿಸಿ ಪುನರವಸ್ಥೆಗೊಳಿಸಲಾಯಿತು.
ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬಾಲ್ಯ ಸುರಕ್ಷತಾ ಅಭಿಯಾನ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವೇಣಿ ವೀರಾಪುರ ಶಾಲೆಯಲ್ಲಿ ಮಕ್ಕಳ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಚಿಲ್ಡ್ರನ್ ಫೌಂಡೇಶನ್ ಆಫ್ ಇಂಡಿಯಾ ರವರ ಸಹಯೋಗದಲ್ಲಿ ಕೊಳ್ಳೇಗಾಲದಲ್ಲಿ ಬಾಲ್ಯ ವಿವಾಹ ಬಾಲಕಾರ್ಮಿಕ ಪದ್ಧತಿ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ನಡೆದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಲಾಯಿತು.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಹಠಾತ್ ದಾಳಿ/ತಪಾಸಣೆಯಲ್ಲಿ ರಕ್ಷಣೆ ಮಾಡಲಾದ ಬಾಲ/ಕಿಶೋರ ಕಾರ್ಮಿಕನಿಗೆ ಇಂದು ಪರಿಶಿಷ್ಟ ಜಾತಿ ಉಪಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪಯೋಜನೆ(ಟಿ.ಎಸ್.ಪಿ)ಯಡಿ ಶೈಕ್ಷಣಿಕ ಕೀಟ್, ಆಹಾರ ಧಾನ್ಯಗಳ ಕಿಟ್, ಸಮವಸ್ತ್ರ ಹಾಗೂ ಇನ್ನಿತರೆ ವಸ್ತುಗಳನ್ನು ನೀಡಲಾಯಿತು.

























