ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆ ನಡೆಸಿ,ವಾಹನಗಳ ತಪಾಸಣೆ ಕೈಗೊಂಡು, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಚಟುವಟಿಕೆಗಳ ಬಗ್ಗೆ ನಿಗಾವಹಿಸಲಾಯಿತು.
ಈ ದಿನ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಯುವ ಸಂಸತ್ ಸಭೆಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಎನ್.ಚೆಲುವರಾಯಸ್ವಾಮಿ ರವರು ಚಾಲನೆ ನೀಡಿದರು, ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು, ಮಾನ್ಯ ಜಿಲ್ಲಾಧಿಕಾರಿಗಳು,
ಅಗ್ರಿಗೋಲ್ಡ್ ಕಂಪನಿಯಿಂದ ಹಣ ಕಳೆದುಕೊಂಡಿರುವ ಸಂತ್ರಸ್ತರವಿಚಾರಣಾ ಸಂಬಂಧ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರ ಜಂಟಿ ಕಾರ್ಯಾಚರಣೆ, ಕೈಗೊಂಡಿರುತ್ತದೆ. ಈ ಹಿನ್ನೆಲೆಯಲ್ಲಿ ಕೆ.ಆರ್. ಪೇಟೆ ತಾಲ್ಲೂಕಿಗೆ, ಸಂಬಂಧಿಸಿದ ಹಣಕಳೆದುಕೊಂಡಿರುವ ಸಂತ್ರಸ್ತರ ಮಾಹಿತಿಯನ್ನು, ಸಂಗ್ರಹಿಸುವ ಸಲುವಾಗಿ
ಈ ದಿನ ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಎಲ್.ನಾಗೇಶ್ ರವರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ವಾರ್ಷಿಕ ಪರಿಶೀಲನೆ ನಡೆಸಿದರು, ಈ ಸಂದರ್ಭದಲ್ಲಿ ಠಾಣೆಯ ದಾಖಲೆಗಳು, ಪ್ರಕರಣಗಳಿಗೆ ಸಂಬಂಧಿಸಿದ ಸ್ವತ್ತುಗಳು, ವಾಹನಗಳು, ಶಸ್ತ್ರಾಸ್ತ್ರಗಳು ಹಾಗೂ ಠಾಣೆಯ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿ,ಠಾಣಾ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ
ಮಂಡ್ಯ ನಗರದ ಕಲಾ ಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ರವರು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಗಣ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು,
ಈ ದಿನ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಕಾರ್ಯಕ್ರಮದ ಮೆರವಣಿಗೆಗೆ ನಗಾರಿ ಬಾರಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಮಾನ್ಯ ಜಿಲ್ಲಾ ಪಂಚಾಯತ್ ಸಿಇಓ ರವರು,
ಸೈಬರ್ ವಂಚನೆಯಾದರೆ ತಡ ಮಾಡಬೇಡಿ! 1930ಗೆ ಕರೆ ಮಾಡಿ ದೂರು ದಾಖಲಿಸಿ, ತಕ್ಷಣದ ದೂರು — ನಿಮ್ಮ ಹಣದ ರಕ್ಷಣೆಗೆ ಮೊದಲ ಹೆಜ್ಜೆ!
ಈ ದಿನ ಅಕ್ಕ ಪಡೆಯ ಸಿಬ್ಬಂದಿಗಳು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ನಡೆಸಿ ಮಹಿಳೆಯರಿಗೆ ಸರಗಳ್ಳತನ, ಭಿಕ್ಷಾಟನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.
ಈ ದಿನ ನಾಗಮಂಗಲ ಟೌನ್ ಪೊಲೀಸ್ ಠಾಣಾ ವತಿಯಿಂದ ನಶಾ ಮುಕ್ತ ಯುವ 2026-27 ಕಾರ್ಯಕ್ರಮದ ಪ್ರಯುಕ್ತ ದೇವಲಾಪುರ ಹ್ಯಾಂಡ್ ಪೋಸ್ಟ್ ಬಳಿಯ ಐ.ಟಿ.ಐ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮುಕ್ತ ಕರ್ನಾಟಕ ಹಾಗೂ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದಿನಾಂಕ: 23.10.2026 ರಂದು ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಗಣಂಗೂರು ಟೋಲ್ ಬಂದ್ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ,ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ
ಪೋಲಿಯೋ ವಿರುದ್ಧದ ಹೋರಾಟದಲ್ಲಿ ಪ್ರತಿಯೊಂದು ಮಗುವಿನ ಆರೋಗ್ಯವೂ ಅಮೂಲ್ಯ. ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಪೋಲಿಯೋದಿಂದ ರಕ್ಷಿಸಿ, ಆರೋಗ್ಯವಂತ ಹಾಗೂ ಸುರಕ್ಷಿತ ಭವಿಷ್ಯವನ್ನು ನಿರ್ಮಿಸೋಣ, ನಾಡಿನ ಸಮಸ್ತ ಜನತೆಗೆ ವಿಶ್ವ ಪೋಲಿಯೋ ದಿನದ ಶುಭಾಶಯಗಳು.
ಶಾಂತಿ, ಭದ್ರತೆ, ಮಾನವ ಹಕ್ಕುಗಳು ಮತ್ತು ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಮೂಲಕ ವಿಶ್ವದಾದ್ಯಂತ ಶಾಂತಿ ಹಾಗೂ ಸೌಹಾರ್ದತೆಯನ್ನು ಸ್ಥಾಪಿಸುವಲ್ಲಿ ವಿಶ್ವ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ, ನಾಡಿನ ಸಮಸ್ತ ಜನತೆಗೆ ವಿಶ್ವ ಸಂಸ್ಥೆ ದಿನದ ಶುಭಾಶಯಗಳು.







































